ಬೆಂಗಳೂರು: ಕೆಪಿಸಿಸಿಯ ಜನರೆಲ್ ಸೆಕ್ರೆಟರಿ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ಕಿರಿಕುಳ ಆರೋಪ ಮಾಡಿದ್ದು, ಎಫ್ಐಆರ್ ದಾಖಲಾಗಿದೆ. ಇನ್ನೂ ಆರೋಪ ಎದುರಿಸುತ್ತಿರುವ ಹಿರಿಯ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
Advertisement
ಹೌದು ಲೈಂಗಿಕ ಕಿರುಕುಳ ಮತ್ತು ಮಹಿಳೆಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಗುರಪ್ಪನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದೇ ಈ ಕ್ರಮಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.