ಉಪನ್ಯಾಸಕನಿಂದ ಲೈಂಗಿಕ ಕಿರುಕುಳ ಆರೋಪ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ!

0
Spread the love

ಭುವನೇಶ್ವರ:- ಉಪನ್ಯಾಸಕನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ವಿದ್ಯಾರ್ಥಿನಿಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ.

Advertisement

ಒಡಿಶಾದಲ್ಲಿ ಈ ಘಟನೆ ಜರುಗಿದೆ. ವಿದ್ಯಾರ್ಥಿನಿ ತನ್ನ ಕಾಲೇಜಿನ ವಿಭಾಗದ ಮುಖ್ಯಸ್ಥರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಳು. ಈ ಬಗ್ಗೆ ದೂರು ಕೂಡ ನೀಡಿದ್ದರು. ಯಾವುದೇ ಕ್ರಮ ಜರುಗಿಸದ ಬಗ್ಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಪ್ರಕರಣ ಖಂಡಿಸಿ ಒಡಿಶಾದ ವಿಧಾನಸೌಧದ ಎದುರು ಭಾರಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಜು ಜನತಾದಳ ಕಾರ್ಯಕರ್ತರು ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ‘ಬಾಲಸೋರ್ ಬಂದ್’ಗೆ ಕರೆ ನೀಡಿದ್ದಾರೆ.

ಪ್ರತಿಭಟನಾಕಾರರು ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಶಿಕ್ಷಣ ಸಚಿವ ಸೂರ್ಯಬಂಶಿ ಸೂರಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಪ್ರಕರಣದಲ್ಲಿ ಅವರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದ್ದಾರೆ

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಸಂತ್ರಸ್ತೆಗೆ ನ್ಯಾಯ ಸಿಗಬೇಕು. ಮುಖ್ಯಮಂತ್ರಿ ಮತ್ತು ರಾಜ್ಯ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here