2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕ ಅಂದರ್!

0
Spread the love

ರಾಯಚೂರು:- 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಾಮುಕನನ್ನು ಅರೆಸ್ಟ್‌ ಮಾಡಲಾಗಿದೆ.

Advertisement

ಈ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದ್ದು, ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಬಾಲಕಿಯ ಗ್ರಾಮದವನೇ ಆದ ಶಿವನಗೌಡ ಬಂಧಿತ ಆರೋಪಿ. ನಿತ್ಯ ಸ್ಕೂಲ್ ಬಸ್‌ನಲ್ಲಿ ಶಾಲೆಗೆ ವಿದ್ಯಾರ್ಥಿನಿ ಬರುತ್ತಿದ್ದಳು. ಈ ವೇಳೆ ಆರೋಪಿ ಬಂದು ವಿದ್ಯಾರ್ಥಿನಿಯನ್ನ ಹೊರಗಡೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತ ಆರೋಪಿಸಲಾಗಿದೆ.

ತಮಗೆ ಮಾಹಿತಿ ನೀಡದೆ ಅಪರಿಚಿತನೊಂದಿಗೆ ಮಗಳನ್ನ ಕಳುಹಿಸಿದ್ದಕ್ಕೆ ಪೋಷಕರು ಶಾಲಾ ವ್ಯವಸ್ಥಾಪಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ವ್ಯವಸ್ಥಾಪಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯನ್ನ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಹಿನ್ನೆಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here