ಲೈಂಗಿಕ ಕ್ರಿಯೆಗೆ ಸಹಕರಿಸದ ಬಾಲಕಿಯನ್ನೇ ಕೊಲೆ ಮಾಡಿದ ಕಾಮುಕ ಶಿಕ್ಷಕ!

0
Spread the love

ಗಾಂಧಿನಗರ:- ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ 6 ವರ್ಷದ ವಿದ್ಯಾರ್ಥಿನಿಯನ್ನು ಹತ್ಯೆಗೈದಿರುವ ಘಟನೆ ಗುಜರಾತ್‍ನ ದಾಹೋದ್ ಜಿಲ್ಲೆಯ ಸಿಂಗ್ವಾಡ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಜರುಗಿದೆ.

Advertisement

ಸಿಂಗ್ವಾಡ್ ಗ್ರಾಮದ ಶಾಲಾ ಕಾಂಪೌಂಡ್‍ನಲ್ಲಿ ಮಗುವಿನ ಶವ ಪತ್ತೆಯಾದ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು. ಬಳಿಕ ಪ್ರಕರಣ ಸಂಬಂಧ ಶಾಲೆಯ ಮುಖ್ಯ ಶಿಕ್ಷಕ ಗೋವಿಂದ್ ನಾಥ್‍ನನ್ನು ಬಂಧಿಸಿದ್ದರು. ತನಿಖೆ ವೇಳೆ ಆರೋಪಿ ಬಾಲಕಿಯನ್ನು ಹತ್ಯೆಗೈದಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 10:20ರ ಸುಮಾರಿಗೆ ಕಾರಿನಲ್ಲಿ ಹೋಗುತ್ತಿದ್ದ ಶಿಕ್ಷಕ, ಬಾಲಕಿಯನ್ನು ಶಾಲೆಗೆ ಬಿಡುವುದಾಗಿ ಕರೆದುಕೊಂಡು ಹೋಗಿದ್ದ. ಬಳಿಕ ದಾರಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾನೆ. ಅವಳು ವಿರೋಧಿಸಿ, ಕಿರುಚುವುದನ್ನು ತಡೆಯಲು ಅವಳ ಬಾಯಿ ಮತ್ತು ಮೂಗನ್ನು ಮುಚ್ಚಿದ್ದಾನೆ ಈ ವೇಳೆ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು.

ಬಳಿಕ ಶಾಲೆಗೆ ಹೋಗಿ ಕಾರು ನಿಲ್ಲಿಸಿ, ಶಾಲೆಯ ಅವಧಿ ಮುಗಿದ ಬಳಿಕ ಶಾಲೆಯ ಆವರಣದಲ್ಲಿ ಬಾಲಕಿಯ ಶವವನ್ನು ಆತ ಎಸೆದಿದ್ದ. ಅಲ್ಲದೇ ಬ್ಯಾಗ್ ಮತ್ತು ಚಪ್ಪಲಿಯನ್ನು ತರಗತಿಯಲ್ಲಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಆರಂಭದಲ್ಲಿ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದ ನಂತರ ಶಾಲೆಗೆ ಬಿಟ್ಟಿದ್ದೇನೆ ಎಂದು ಆರೋಪಿ ಹೇಳಿದ್ದ. ಬಳಿಕ ವಿದ್ಯಾರ್ಥಿಗಳು ಹಾಗೂ ಉಳಿದ ಶಿಕ್ಷಕರನ್ನು ವಿಚಾರಿಸಿದಾಗ ಬಾಲಕಿ ಆ ದಿನ ಶಾಲೆಗೆ ಬಂದಿರಲಿಲ್ಲ ಎಂದು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.


Spread the love

LEAVE A REPLY

Please enter your comment!
Please enter your name here