ಬೆಂಗಳೂರು:- ಮಹಿಳೆಯರಿಗೆ ಬಿಗ್ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದೆ. ಶೀಘ್ರವೇ ಫ್ರೀ ಬಸ್ ಸೌಲಭ್ಯ ಕ್ಯಾನ್ಸಲ್ ಆಗೋ ಸಾಧ್ಯತೆ ದಟ್ಟವಾಗಿದೆ ಎಂದೇ ಹೇಳಲಾಗುತ್ತಿದೆ.
Advertisement
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ DCM ಡಿಕೆಶಿ, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ.
ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.
ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧ ಎಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.