ಬೆಂಗಳೂರು: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಕಾಂಗ್ರೆಸ್ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಲಭಿಸಿದೆ.
ಶಕ್ತಿ ಯೋಜನೆಯಡಿ ಇದುವರೆಗೆ ಮಹಿಳಾ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಇದೀಗ ಗಂಡು ವಿದ್ಯಾರ್ಥಿಗಳಿಗೂ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ ಗೈಡ್‌ಲೈನ್ಸ್ ಬಿಡುಗಡೆ ಆಗುವ ಸಾಧ್ಯತೆ ಇದೆ.
ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ಭಾರ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.
ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ತಮ್ಮ ಹತ್ತಿರದ ‘ಕರ್ನಾಟಕ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ದಾಖಲೆಗಳ ಪರಿಶೀಲನೆಯ ಬಳಿಕ ಸಂಪೂರ್ಣ ಉಚಿತವಾಗಿ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.



