ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತ ಹೋರಾಟಗಾರ ಶಂಕರಗೌಡ್ ಮಹಾದೇವಗೌಡ ಜಾಯನಗೌಡ್ರ ನೇಮಕಗೊಂಡಿದ್ದಾರೆ.
Advertisement
ಇತ್ತೀಚೆಗೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ನೇಮಕಾತಿಯ ಆದೇಶ ಪ್ರತಿ ನೀಡಿ, ರೈತಪರ ಹೋರಾಟ ಹಾಗೂ ಸಂಘದ ಕಾರ್ಯಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.