ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಇತ್ತೀಚೆಗೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಶಿರಹಟ್ಟಿ ತಾಲೂಕು ಅಧ್ಯಕ್ಷರಾಗಿ ಶರಣಬಸವ ಕೆ. ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ದ್ಯಾಮಪ್ಪ ದ್ಯಾಮಣ್ಣವರ ಹಾಗೂ ಖಜಾಂಚಿಯಾಗಿ ಮೋಹನ ಮಾಂಡ್ರೆ ಆಯ್ಕೆಯಾಗಿದ್ದಾರೆ.
ಶರಣಬಸವ ಪಾಟೀಲ ಈ ಹಿಂದೆ 2014-2019ರ ಅವಧಿಯಲ್ಲಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹಾಗೂ 2019-2025ರ ಅವಧಿಯಲ್ಲಿ ಶಿರಹಟ್ಟಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.



