HomePolitics Newsಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಬೆಟಗೇರಿ

ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಬೆಟಗೇರಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಗಜೇಂದ್ರಗಡ ತಾಲೂಕಾ ಸಮಿತಿಯ ಅಧ್ಯಕ್ಷರನ್ನಾಗಿ ಸಮೀಪದ ಹಾಲಕೆರೆ ಗ್ರಾಮದ ಶರಣಪ್ಪ ಬೆಟಗೇರಿ ಅವರನ್ನು ಖನಿಜ ಅಭಿವೃದ್ಧಿ ನಿಗಮದ ಆಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲರು ನೇಮಕಗೊಳಿಸಿ ಆದೇಶಿಸಿದ್ದಾರೆ.

ಶರಣಪ್ಪ ಬೆಟಗೇರಿಯವರು ದಶಕಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ, ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದಲೇ ಬಲಪಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಅವರ ಈ ಕಾರ್ಯಗಳನ್ನು ವೈಖರಿ ಮೆಚ್ಚಿ ಈ ನೇಮಕವನ್ನು ಮಾಡಿದ್ದಾರೆ.

ಶರಣಪ್ಪ ಅವರು ಆಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಅವರ ಕುಟುಂಬ ಪರಿವಾರದವರು ಮತ್ತು ಆಪ್ತವಲಯದವರು ಹರುಷ ವ್ಯಕ್ತಪಡಿಸಿದ್ದಾರೆ.

ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಎಲ್ಲರಿಗೂ ಸರ್ಕಾರದ ಯೋಜನೆಯಗಳನ್ನು ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದಾಗಿ ಬೆಟಗೇರಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img