ರಾಯಚೂರು: ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ.
ಇನ್ಸ್ಟ್ರಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿ ಜೊತೆ ಮೃತ ವರುಣ್ ಪ್ರೀತಿ ಮಾಡಿದ್ದ. ಬಳಿಕ ಆ ಯುವತಿ ಬೇರೊಬ್ಬರ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಹಿನ್ನೆಲೆ ಮನನೊಂದು ವರುಣ್ ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



