ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ವೃದ್ದೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತ ದುರ್ದೈವಿ.
ತೋಟದ ಪಂಪ್ ಸೆಟ್ಟಿನ ವಿದ್ಯುತ್ ವೈಯರ್ ಬೇಲಿಗೆ ಸುತ್ತಿಟ್ಟಿದ್ದ ಪರಿಣಾಮ ಬೇಲಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಬೇಲಿ ಮುಟ್ಟಿದ ವೃದ್ದೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



