ಶಿವಮೊಗ್ಗ: ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು!

0
Spread the love

ಶಿವಮೊಗ್ಗ: ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದಲ್ಲಿ ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ಅ.24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ಮಗು.

Advertisement

ಕಳೆದ ವಾರ ರಾಜೇಶ್ ಅವರ ನೆರೆಮನೆ ನಿವಾಸಿ ಮೃತಪಟ್ಟಿದ್ದರು. ಹೀಗಾಗಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ರೆಡಿ ಮಾಡಿಟ್ಟಿದ್ದರು. ಟೀ ಪಾತ್ರೆಯನ್ನು ಮೈಮೇಲೆ ಬೀಳಿಸಿಕೊಂಡು ಮಗು ಗಾಯಗೊಂಡಿತ್ತು.

ಗಾಯಗೊಂಡ ಮಗುವಿಗೆ ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

 


Spread the love

LEAVE A REPLY

Please enter your comment!
Please enter your name here