ಶಿವಮೊಗ್ಗ:-ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಗಳ ಗ್ರಾಮದಲ್ಲಿ ಜನಪದ ವೈದ್ಯರತ್ನ, ನಾಟಿ ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಎಂ.ಬಿ.ಶಿವಣ್ಣಗೌಡ ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಣ್ಣಗೌಡ ಇಂದು ಮುಂಜಾನೆ 4.45ಕ್ಕೆ ದೈವಾಧೀನರಾಗಿದ್ದಾರೆ. ಕಳೆದ ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿಯಲ್ಲಿ ಯಾವುದೇ ಪ್ರಚಾರವಿಲ್ಲದೇ ಇವರು ಯಶಸ್ಸು ಕಂಡಿದ್ದರು.
ಪಾರಂಪರಿಕ ನಾಟಿ ಔಷಧಿ ನೀಡುತ್ತ ಸಾವಿರಾರು ಜನರ ಬದುಕಿಗೆ ಆಶಾಕಿರಣರಾಗಿದ್ದ ಶಿವಣ್ಣ ಗೌಡರಿಂದ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಅನುಕೂಲ ಪಡೆದುಕೊಂಡಿದ್ದಾರೆ. ಮಾಜಿ ಸಚಿವೆ ಮನೋರಮ ಮದ್ವರಾಜ್, ಪತ್ರಕರ್ತೆ ಗೌರಿ ಲಂಕೇಶ್, ಸಾಹಿತಿ ಚಂದ್ರಶೇಖರ್ ಕಂಬಾರ್, ಮಾಜಿ ಸಚಿವ ಈಶ್ವರಪ್ಪ ಹಾಗೂ ಹೊರರಾಜ್ಯಗಳ ಹಾಗೂ ಹೊರರಾಷ್ಟ್ರದ ಅನೇಕರು ಇವರಿಂದ ಔಷಧಿ ಪಡೆದಿದ್ದರು ಎನ್ನಲಾಗಿದೆ.
ಇದೀಗ ಎಂ.ಬಿ.ಶಿವಣ್ಣಗೌಡ ಅವರ ನಿಧನಕ್ಕೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ.