ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಶಿಕ್ಷಣ ಇಲಾಖೆಯ ಅನುದಾನ ದುರುಪಯೋಗದ ಹಿನ್ನೆಲೆಯಲ್ಲಿ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಅವರನ್ನು ಅಮಾನತ್ತು ಮಾಡಿ ಸರಕಾರ ಆದೇಶ ಹೊರಡಿಸಿದೆ.
೨೦೨೨-೨೩ನೇ ಸಾಲಿನಲ್ಲಿ ತಾಲೂಕು ಪಂಚಾಯಿತಿಯಿಂದ ಶಿಕ್ಷಕರ ವೆಚ್ಚಕ್ಕಾಗಿ ಮೀಸಲಿರಿಸಲಾಗಿದ್ದ ಅನುದಾನವನ್ನು ನಿಯಮಾವಳಿಯಂತೆ ಎಸ್‌ಡಿಎಂಸಿ ಖಾತೆಗೆ ಜಮೆ ಮಾಡದೆ ಬಿಇಓ ಅವರು ಸ್ವತಃ ೮ ಲಕ್ಷ ರೂಗಳನ್ನು ಖರ್ಚು ಮಾಡಿ ನಿಯಮ ಮೀರಿದ್ದಾರೆ.
ಇವರ ವಿರುದ್ದ ಕರ್ನಾಟಕ ನಾಗರೀಕ ಸೇವಾ ನಿಯಮ ೧೯೫೭ರ ಪ್ರಕಾರ ಸೂಕ್ತ ಕ್ರಮ ಜರುಗಿಸುವಂತೆ ಅಪರ ಆಯುಕ್ತರು ಶಿಕ್ಷಣ ಇಲಾಖೆ ಧಾರವಾಡ ಇವರು ಸರಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಬಾಕಿ ಇರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಫೆ.೧೭ರಂದು ಅಮಾನತುಗೊಳಿಸಿ ಆದೇಶಿಸಿದೆ.
ಆರೋಪಿತ ಅಧಿಕಾರಿಯ ಲೀನ್ ಅನ್ನು ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾವೇರಿ ಇಲ್ಲಿನ ಖಾಲಿ ಹುದ್ದೆಗೆ ವರ್ಗಾಯಿಸಿ ಆದೇಶಿಸಲಾಗಿದೆ.