HomeCrime NewsCrime News: ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ!

Crime News: ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ!

For Dai;y Updates Join Our whatsapp Group

Spread the love

ಗದಗ : ಜಿಲ್ಲೆಯ ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಸುನೀಲ್ ಲಮಾಣಿ (25) ಆತ್ಮಹತ್ಯೆ ಮಾಡಿಕೊಂಡ ಚಾಲಕನಾಗಿದ್ದು, ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರ್‌ ಚಾಲಕನಾಗಿ ಸುನೀಲ್ ಕೆಲಸ ಮಾಡುತ್ತಿದ್ದನು.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ಸದ್ಯಕ್ಕೆ ಮಾಹಿತಿ ನೀಡಿದ್ದಾರೆ.

ಶಾಸಕ ಚಂದ್ರು ಲಮಾಣಿಗೆ ಸೇರಿದ ಮನೆಯಲ್ಲಿ ಸುನೀಲ್ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದು ಶಿರಹಟ್ಟಿ ಸಿಪಿಐ ನಾಗರಾಜ್ ಮಾಡೊಳ್ಳಿ‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!