ನವದೆಹಲಿ: ನವದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ಬಿಚ್ಚಿ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ತಿಲಕ್ ಮಾರ್ಗ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆಗೆ ಸಂಬಂಧಿಸಿದಂತೆ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸುಮಾರು 15 ಗಂಟೆಗಳ ವಿಚಾರಣೆಯ ನಂತರ ಚಿಬ್ ಅವರನ್ನು ಬಂಧಿಸಲಾಗಿದೆ. ಚಿಬ್ ವಿಚಾರಣೆಯ ಸಮಯದಲ್ಲಿ ಸಹಕರಿಸಲಿಲ್ಲ. ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು. ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ.
ಪೊಲೀಸ್ ಠಾಣೆ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಈ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



