ಶಿವಾಜಿ ಜಯಂತಿಯ ಪೂರ್ವಭಾವಿ ಸಭೆ ಇಂದು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಪ್ರತಿವರ್ಷ ಅವಳಿ ನಗರದಲ್ಲಿ ಅದ್ದೂರಿಯಾಗಿ, ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2025ರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ಭಾನುವಾರ ನಗರದ ರಾಚೋಟಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕರೆಯಲಾಗಿದೆ.

Advertisement

ಪ್ರತಿ ವರ್ಷ ಹಿಂದೂಗಳ ಪಾಲಿನ ಆರಾಧ್ಯ ದೈವವಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ-ವೈಭವಗಳೊಂದಿಗೆ ಆಚರಿಸಿಕೊಂಡು ಬರಲಾಗಿದೆ. ಈ ವರ್ಷದ ಆಚರಣೆಯ ಕುರಿತು ಪೂರ್ವಭಾವಿ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಗುವುದು.

ಸಮಸ್ತ ಹಿಂದೂ ಬಾಂಧವರು ಈ ಪೂರ್ವಭಾವಿ ಸಭೆಗೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಛತ್ರಪತಿ ಶಿವಾಜಿ ಮಹಾರಾಜರ ಕಮಿಟಿ ಪ್ರಕಟಣೆ ಮೂಲಕ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here