ಶಿವಮೊಗ್ಗ:- ನಗರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
Advertisement
ಕೊಲೆಯಾದ ಯುವಕನನ್ನು 38 ವರ್ಷದ ಮಣಿಕಂಠ ಎಂದು ಗುರುತಿಸಲಾಗಿದೆ. ಮಣಿಕಂಠ, ಒಬ್ಬನೇ ವಾಸವಾಗಿದ್ದ. ಅಲ್ಲದೇ ಗಾರೆ ಕೆಲಸ ಮಾಡಿ, ಜೀವನ ನಡೆಸುತ್ತಿದ್ದ. ಆದರೆ ತಡರಾತ್ರಿ ಭೀಕರವಾಗಿ ಕೊಲೆಯಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.