ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಗರ್ತಿಕೆರೆಯ ಕೃಷ್ಣ (44) ಮೃತ ಸಜಾಬಂಧಿಯಾಗಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸಜಾಬಂಧಿ ಕೃಷ್ಣ, ಏ.29, 2025 ರಂದು ವಿಚಾರಣಾ ವಿಭಾಗದಿಂದ ಶಿಕ್ಷಾ ವಿಭಾಗಕ್ಕೆ ವರ್ಗಾವಣೆಯಾಗಿದ್ದರು.
ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣನನ್ನು, ಹಲವು ಬಾರಿ ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಸಹ ಕೊಡಿಸಲಾಗುತ್ತಿತ್ತು. ಆದರೆ, ಡಿ. 5ರ ಸಂಜೆ ಸಮಯ ತುರ್ತು ಚಿಕಿತ್ಸೆಗಾಗಿ ಮತ್ತೆ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕಳುಹಿಸಲಾಗಿತ್ತು.
ಈತನನ್ನು ಪರೀಕ್ಷಿಸಿದ ಅಲ್ಲಿನ ವೈದ್ಯರು, ಬಂಧಿಯನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣ ತಡ ರಾತ್ರಿ 2 ಗಂಟೆ ವೇಳೆ ಮೃತಪಟ್ಟಿರುವುದಾಗಿ ಕೇಂದ್ರ ಕಾರಾಗೃಹದ ಮುಖ್ಯ ಅಧಿಕ್ಷಕ ಡಾ.ರಂಗನಾಥ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



