ಶಿವಮೊಗ್ಗ:- ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಅನಾರೋಗ್ಯಕ್ಕೀಡಾದ 15 ವರ್ಷದ ಗಂಡು ಚಿರತೆಯನ್ನು ತುರ್ತಾಗಿ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಯಿತು.
ಕಳೆದ ಎರಡು ದಿನದಿಂದ ಚಿರತೆ ನಿತ್ರಾಣಗೊಂಡಿದ್ದದರಿಂದ, ಮೃಗಾಲಯದ ವೈದ್ಯರು ತುರ್ತಾಗಿ ಸ್ಕ್ಯಾನಿಂಗ್ ಅಗತ್ಯವಿದೆ ಎಂದು ಸೂಚಿಸಿದ್ದರು. ಶಿವಮೊಗ್ಗ ಮೃಗಾಲಯದಲ್ಲಿ ಹಾಗೂ ಪಶುವೈದ್ಯಕೀಯ ಕಾಲೇಜಿನಲ್ಲಿ ಎಂಆರ್‌ಐ ಸೌಲಭ್ಯದ ಕೊರತೆ ಇದ್ದುದರಿಂದ, ಚಿರತೆಯನ್ನು ಮಂಪರು ಇಂಜೆಕ್ಷನ್ ನೀಡಿ ಮೃಗಾಲಯದ ವಾಹನದಲ್ಲಿ ನಂಜಪ್ಪ ಆಸ್ಪತ್ರೆಗೆ ಕರೆತಂದು, ಬೆಳಗಿನ ಹೊತ್ತಿನಲ್ಲಿ ಜನ ಹೆಚ್ಚಿರುವ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಲ್ಲಿಯೇ ಸ್ಕ್ಯಾನಿಂಗ್ ಮಾಡಲಾಯಿತು.
ಸ್ಕ್ಯಾನಿಂಗ್ ಪ್ರಕ್ರಿಯೆ ಸುಮಾರು ಅರ್ಧ ಗಂಟೆ ನಡೆಯಿತು.



