ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲ್ ಹಾಸನ್ ಹೇಳಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಥಗ್ ಲೈಪ್ ಪ್ರಚಾರ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಮುಂದೆಯೇ ಕಮಲ್ ಈ ಹೇಳಿಕೆ ನೀಡಿದ್ದರು. ಇದೀಗ ಕಮಲ್ ಹೇಳಿಕೆಯ ಕುರಿತು ಕೇಳಿದಕ್ಕೆ ಶಿವರಾಜ್ ಕುಮಾರ್ ಕೈಮುಗಿದು ಹೊರಟು ಹೋಗಿದ್ದಾರೆ.
ವಿಷ್ಣು ಮುಂಚು ನಟನೆಯ ಕಣ್ಣಪ್ಪ ಸಿನಿಮಾ ಸದ್ಯದಲ್ಲೇ ರಿಲೀಸ್ ಆಗಿಲಿದೆ. ಈ ಹಿನ್ನೆಲೆಯಲ್ಲಿ ಕಣ್ಣಪ್ಪ ಚಿತ್ರತಂಡ ಇಂದು (ಮೇ 31) ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿತ್ತು. ಈ ಕಾರ್ಯಕ್ರಮಕ್ಕೆ ಶಿವಣ್ಣ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ, ಕಮಲ್ ಹಾಸನ್ ಹೇಳಿಕೆಯ ಕುರಿತು ಕೇಳಿದ್ದಕ್ಕೆ ಕೈಮುಗಿದು ನಮಸ್ಕರಿಸುತ್ತಾ ಹೋರಟು ಹೋದರು.
ಕಮಲ್ ವಿವಾದದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ ನೀಡದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಮಲ್ ನೀಡಿರುವ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಕಮಲ್ ಕ್ಷಮೆ ಕೇಳಬೇಕು ಎಂಬ ಒತ್ತಾಯ ಕೇಳಿ ಬರ್ತಿದೆ. ಆದ್ರೆ ಯಾವುದೇ ಕಾರಣಕ್ಕೆ ತಾನು ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗುತ್ತಿದೆ.