ಸ್ಯಾಂಡಲ್ ವುಡ್ ನಟಿ ರಮ್ಯಾ ಹಾಗೂ ದರ್ಶನ್ ಅಭಿಮಾನಿಗಳ ವಾಕ್ ಸಮರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಆಕ್ರೋಶಗೊಂಡಿದ್ದು ನಟಿಯ ಬಗ್ಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದರು. ಈಗಾಗಲೇ ಹಲವರು ರಮ್ಯಾ ಪರ ನಿಂತಿದ್ದು ಇದೀಗ ನಟ ಶಿವರಾಜ್ ಕುಮಾರ್ ದಂಪತಿ ರಮ್ಯಾ ಪರ ನಿಂತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಿವರಾಜ್ ಕುಮಾರ್, ‘ರಮ್ಯಾ, ನಿಮ್ಮ ನಿಲವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ’ ಎಂದಿದ್ದಾರೆ. ಮುಂದುವರೆದು, ‘ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಹೀಗೆ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು’ ಎಂದಿದ್ದಾರೆ.
ಅಂತೆಯೇ ‘ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಷಿಯಲ್ ಮೀಡಿಯಾ ತುಂಬಾ ಬಲಷ್ಠವಾದ ಅಸ್ತ್ರ ಅದನ್ನು ತಮ್ಮ ಏಳಿಗಾಗಿ ಬಳಸಬೇಕೇ ಹೊರತು ಅವಾಚ್ಯ ಶಬ್ದಗಳಿಂದ ನಿಂದಿಸಿ ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲವು ಸರಿಯದೆ, ನಿಮ್ಮ ಜೊತೆ ನಾವು ನಿಲ್ಲುತ್ತೇವೆ’ ಎಂದಿದ್ದಾರೆ.
ಇನ್ನು ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರೂ ಸಹ ಈ ಸಂದೇಶವನ್ನು ಹಂಚಿಕೊಂಡಿದ್ದು, ಇಬ್ಬರೂ ಸಹ ರಮ್ಯಾ ಪರವಾಗಿ ನಿಂತಿದ್ದಾರೆ.