ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ನಟನೆಯ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭವಾಗಿದೆ. ಕಳೆದ ಮೂರು ನಾಲ್ಕು ದಿನಗಳ ಹಿಂದಷ್ಟೇ ನಟ ಡಾಲಿ ಧನಂಜಯ್ ಅವರ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಇದೀಗ ನಟ ಶಿವರಾಜ್ ಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸದ್ಯ ಬಿಡುಗಡೆ ಆಗಿರುವ ಪೋಸ್ಟರ್ ನಲ್ಲಿ ಶಿವರಾಜ್ ಕುಮಾರ ಸಖತ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.
‘ಡ್ರೀಮ್ ಥಿಯೇಟರ್‌ಗೆ ಒಬ್ನೇ ರಾಜ’ ಎಂಬ ಕ್ಯಾಪ್ಷನ್ನೊಂದಿಗೆ ಶಿವರಾಜ್‌ಕುಮಾರ್ ಅವರ ಈ ಹೊಸ ಪೋಸ್ಟರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಶಿವಣ್ಣ ಅವರ ಈ ಗೆಟಪ್ ರೆಟ್ರೋ ಶೈಲಿಯಲ್ಲಿದೆ. ಸೂಟ್ ಧರಿಸಿ, ಕೈಯಲ್ಲಿ ರಿವಾಲ್ವರ್ ಹಿಡಿದು ಶಿವಣ್ಣ ಎಂಟ್ರಿಕೊಡ್ತಿದ್ದಾರೆ. ಪೋಸ್ಟರ್ ನೋಡಿದ ಶಿವಣ್ಣನ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದಾರೆ.
666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾವನ್ನು ಹೇಮಂತ್ ಎಂ ರಾವ್ ನಿರ್ದೇಶನ ಮಾಡುತ್ತಿದ್ದು ವೈಶಾಕ್ ಜೆ. ಗೌಡ ಅವರ ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.