ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಅಣ್ಣಿಗೇರಿ ಗ್ರಾಮದ ಎಂ.ಬಿ. ಹಳ್ಳಿ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಶೋಭಾ ಎನ್ ಅವರಿಗೆ ಪಿಎಚ್‌ಡಿ ಪ್ರದಾನ ಮಾಡಲಾಗಿದೆ.
ಆಂಧ್ರಪ್ರದೇಶದ ಡ್ರಾವಿಡಿಯನ್ ವಿಶ್ವವಿದ್ಯಾನಿಲಯ ಕುಪ್ಪಂನಲ್ಲಿ `ವಿದ್ಯುತ್ ಮಗ್ಗ ಉದ್ಯಮದ ಸಮಸ್ಯೆಗಳು ಮತ್ತು ನಿರೀಕ್ಷೆಗಳು-ಗದಗ ಜಿಲ್ಲೆಯ ಒಂದು ಪ್ರಕರಣ ಅಧ್ಯಯನ’ ಎನ್ನುವ ವಿಷಯದಲ್ಲಿ ಗದಗ ನಗರದ ಆದರ್ಶ ಶಿಕ್ಷಣ ಸಮಿತಿಯ ನಿವೃತ್ತ ಪ್ರಾಧ್ಯಾಪಕ ಡಾ. ಎಂ.ಎಲ್. ಗುಳೇದಗುಡ್ಡ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು.



