ನಟ ದರ್ಶನ್ʼಗೆ ಶಾಕ್: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದ ಸರ್ಕಾರ!

0
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಟ ದರ್ಶನ್ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ದರ್ಶನ್​ಗೆ ನೀಡಿದ್ದ  ಜಾಮೀನನ್ನು ಪ್ರಶ್ನೆ ಮಾಡಲು ಪೊಲೀಸರು ಮುಂದಾಗಿದ್ದು, ಇದಕ್ಕೆ ಸರ್ಕಾರದಿಂದ ಒಪ್ಪಿಗೆ ಕೂಡ ಸಿಕ್ಕಿದೆ.

Advertisement

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆರೋಪಿ ಆಗಿದ್ದಾರೆ. ಅವರು ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು. ಈಗ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ.

ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಇದಕ್ಕೆ ಅನುಮತಿ ಕೂಡ ನೀಡಿದೆ. ಈಗ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಸುಪ್ರೀಂ ಕೋರ್ಟ್​ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.

 


Spread the love

LEAVE A REPLY

Please enter your comment!
Please enter your name here