ಬೆಂಗಳೂರು:- ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿರುವ ಲೋಕಾಯುಕ್ತ ಅಧಿಕಾರಿಗಳು, ಬೆಳ್ಳಂಬೆಳಗ್ಗೆ ಸುಮಾರು 25 ಕಡೆ ದಾಳಿ ಮಾಡಿದೆ.
Advertisement
ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದ್ದು, ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಅವರ ಮೇಲೂ ದಾಳಿ ನಡೆದಿದೆ. ಅದರಂತೆ ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಸೇರಿ ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದ್ದು, ಹಲವು ದಾಖಲೆ ಪರಿಶೀಲಿಸಿದ್ದಾರೆ.