HomeSports Newsಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡಕ್ಕೆ ಆಘಾತ: ಅಭ್ಯಾಸದ ವೇಳೆ ರಿಷಭ್ ಪಂತ್‌ʼಗೆ ಗಾಯ

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡಕ್ಕೆ ಆಘಾತ: ಅಭ್ಯಾಸದ ವೇಳೆ ರಿಷಭ್ ಪಂತ್‌ʼಗೆ ಗಾಯ

For Dai;y Updates Join Our whatsapp Group

Spread the love

2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.

ಇನ್ನೂ ಇದರ ನಡುವೆ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಹಾರ್ದಿಕ್ ಪಾಂಡ್ಯ ಅವರು ಪಂತ್‌ಗೆ ಬಾಲ್‌ ಎಸೆಯತ್ತಿದ್ದರು. ಈ ವೇಳೆ ಬಾಲ್‌ ಪಂತ್‌ ಅವರ ಎಡ ಮೊಣಕಾಲಿಗೆ ಬಡಿದಿದೆ. ಪೆಟ್ಟು ಬಿದ್ದ ನಂತರ ಪಂತ್‌ ಕುಂಟುತ್ತಾ ನಡೆದಿದ್ದಾರೆ.

ವೈದ್ಯಕೀಯ ಆರೈಕೆಯ ನಂತರ ಪಂತ್ ಮೊಣಕಾಲಿನ ಪಟ್ಟಿಯೊಂದಿಗೆ ಅಭ್ಯಾಸವನ್ನು ಮುಂದುವರೆಸಿದ್ದಾರೆ ಎಂದು ವರದಿಯಾಗಿದೆ. 2022 ರಲ್ಲಿ ರಿಷಭ್ ಪಂತ್‌ ಅವರ ಕಾರು ಭೀಕರ ಅಪಘಾತವಾಗಿದ್ದು. ಈ ಸಂದರ್ಭದಲ್ಲಿ ಎಡ ಮೊಣಕಾಲಿಗೆ ಬಲವಾದ ಏಟು ಬಿದ್ದಿತ್ತು. ಪಂತ್ ತಮ್ಮ ಮೊದಲ ಚಾಂಪಿಯನ್ಸ್ ಟ್ರೋಫಿಯನ್ನು ಆಡುತ್ತಿದ್ದಾರೆ. ಭಾರತವು ಫೆಬ್ರವರಿ 20 ರಂದು ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸಲಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!