ಭಾರತ ಸೇರಿ ವಿಶ್ವದಲ್ಲಿಯೇ ಚಿನ್ನಕ್ಕೆ ಚಿನ್ನ ಮಾತ್ರವೇ ಸಾಟಿ ಎನ್ನುವಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಯಾರೂ ಊಹಿಸದ ರೀತಿಯಲ್ಲಿ ಚಿನ್ನ ತನ್ನ ಬೆಲೆ ಹೆಚ್ಚಿಸಿಕೊಂಡಿದೆ. ಬೇರೆ ದೇಶಗಳಿಗೆ ಹೋಲಿಸಿದೆರೆ, ಭಾರತೀಯರಿಗೆ ಅದರಲ್ಲೂ ಮಹಿಳೆಯರಿಗೆ ಚಿನ್ನ ಅಂದರೆ ಪ್ರೀತಿ. ಯಾವುದೇ ಸಮಾರಂಭ ಇರಲಿ, ಹಬ್ಬವಿರಲಿ ಅವರು ಮೊದಲು ಕೇಳುವುದೇ ಚಿನ್ನ. ಈ ಹಬ್ಬಕ್ಕಾದ್ರೂ ಒಂದು ಸ್ವಲ್ಪ ಬಂಗಾರ ತೆಗೆದುಕೊಳ್ಳೋಣ ಅನ್ನೋ ಬೇಡಿಕೆ ಇವರ ಬಾಯಲ್ಲಿ ಬರುತ್ತದೆ.
ದೇಶೀಯ ಮಾರುಕಟ್ಟೆಯಲ್ಲಿ ಬುಧವಾರ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 11,864 ರೂಪಾಯಿ ಆಗಿದ್ದು,ಇಂದು ಬರೋಬ್ಬರಿ 120 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 110 ರೂಪಾಯಿ ಹೆಚ್ಚಳ ಆಗಿದ್ದು, 10,875 ರುಪಾಯಿಗೆ ಏರಿಕೆ ಆಗಿದೆ.
24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯು 1200 ರೂಪಾಯಿ ಹೆಚ್ಚಳ ಆಗಿ, 1,18,640 ರುಪಾಯಿಗೆ ಹೆಚ್ಚಳ ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1100 ರೂ ಹೆಚ್ಚಳ ಆಗಿ, 1,08,750 ರೂಪಾಯಿಗೆ ಏರಿಕೆ ಆಗಿದೆ.ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 11,864 ರೂ ಇದೆ. ಬೆಳ್ಳಿಯ ಬೆಲೆ ಇಂದು ತಟಸ್ಥವಾಗಿದ್ದು, ಗ್ರಾಂ ಬೆಲೆ 151 ರೂ ಆಗಿದ್ದು, ಕೆಜಿ ಬೆಲೆ 1,51,000 ರೂ ಆಗಿದೆ.



