ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದ KSRTC ನೌಕರರಿಗೆ ಶಾಕ್: ಎಸ್ಮಾ ಜಾರಿ!

0
Spread the love

ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದ ಕೆಎಸ್ಆರ್​ಟಿಸಿ ಸಾರಿಗೆ ನೌಕರರಿಗೆ ಕಾರ್ಮಿಕ ಇಲಾಖೆ ಶಾಕ್​ ನೀಡಿದ್ದು, 6 ತಿಂಗಳು ಎಸ್ಮಾ ಜಾರಿ ಮಾಡಿದೆ.

Advertisement

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಕೆಎಸ್ಆರ್​​ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದೆ. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ಅಡಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗುವಂತ್ತಿಲ್ಲ. ಜುಲೈ 1ರಿಂದ ಡಿಸೆಂಬರ್​ 12ರ ವರೆಗೆ ನಿಗಮದಲ್ಲಿ‌ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್​ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಎಸ್ಮಾ ಅಂದರೆ ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ. ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಚಾಲ್ತಿಯಲ್ಲಿದೆ. 1994ರಲ್ಲಿ ಕರ್ನಾಟಕದಲ್ಲಿ ಎಸ್ಮಾ ಕುರಿತು ಕಾನೂನಿನ ರೂಪುರೇಷೆ ಸಿದ್ಧಪಡಿಸಲಾಗಿದೆ. ಈ ಕಾಯ್ದೆಯಲ್ಲಿ ಒಟ್ಟು 9 ಸೆಕ್ಷನ್​ಗಳಿವೆ. ಈ ಸಂದರ್ಭದಲ್ಲಿ ಯಾವುದೇ ನೌಕರರು ಅಥವಾ ಸಂಘಟನೆ ಮುಷ್ಕರ ನಡೆಸಿದರೆ ಅದು ಕಾನೂನುಬಾಹಿರವಾಗುವುದು. ಒಂದು ವೇಳೆ ನೌಕರರು ಅಥವಾ ಸಂಘಟನೆ ಕಾನೂನುಬಾಹಿರ ಮುಷ್ಕರ ನಡೆಸಿದರೆ 1 ವರ್ಷ ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸುವ ಅವಕಾಶವಿರುತ್ತದೆ. ಅಷ್ಟೇ ಅಲ್ಲದೆ ಇಂತಹ ಕಾನೂನುಬಾಹಿರ ಮುಷ್ಕರಕ್ಕೆ ಪ್ರೇರಣೆ ಅಥವಾ ಪ್ರಚೋದನೆ ನೀಡುವುದು ಕೂಡ ಅಪರಾಧವಾಗಿದ್ದು, ಸೆಕ್ಷನ್‌ 5ರ ಪ್ರಕಾರ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ ದಂಡ ವಿಧಿಸಬಹುದಾಗಿದೆ.


Spread the love

LEAVE A REPLY

Please enter your comment!
Please enter your name here