ಹಿರಿಯ ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹೊತ್ತಲ್ಲೇ ಬಾಲಿವುಡ್ ಗೆ ಮತ್ತೊಂದು ಆಘಾತ ಎದುರಾಗಿದೆ.
ಗೋವಿಂದ ಅವರು, ತಮ್ಮ ಮುಂಬೈ ನಿವಾಸದಲ್ಲಿ ಮಂಗಳವಾರ ರಾತ್ರಿ ಕುಸಿದು ಬಿದ್ದರು. ಅವರನ್ನು ಜುಹುವಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಅವರ ಗೆಳೆಯ ಹಾಗೂ ಅವರ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಖಚಿತಪಡಿಸಿದ್ದಾರೆ.
ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳ ವರದಿ ಇನ್ನಷ್ಟೇ ಬರಬೇಕಿದೆ. ಗೋವಿಂದ ಪ್ರಜ್ಞೆತಪ್ಪಲು ಕಾರಣ ಇನ್ನೂ ಬಹಿರಂಗವಾಗಿಲ್ಲ. ಪರೀಕ್ಷಾ ವರದಿ ಬಂದ ಬಳಿಕ ಈ ವಿಚಾರ ರಿವೀಲ್ ಆಗಲಿದೆ.
ಇನ್ನೂ ಮತ್ತೊಂದೆಡೆ ಧರ್ಮೇಂದ್ರ ಅವರು ಆಸ್ಪತ್ರೆ ಸೇರಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಸೋಮವಾರ ಗೋವಿಂದ ಅವರು ಧರ್ಮೇಂದ್ರ ದಾಖಲಾದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಅವರ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ತುಂಬಿ ಬಂದಿದ್ದರು. ಈ ಸಂದರ್ಭದಲ್ಲಿ ಗೋವಿಂದ ಅವರು ಭಾವುಕರಾಗಿದ್ದರು. ಗೋವಿಂದ ರೀತಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆರ್ಯನ್ ಖಾನ್ ಸೇರಿದಂತೆ ಅನೇಕರು ಧರ್ಮೇಂದ್ರ ಆರೋಗ್ಯ ವಿಚಾರಿಸಿದ್ದಾರೆ.


