ಬೆಂಗಳೂರು:- ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ.
Advertisement
ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್ ಜನಾರ್ಧನ್ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ.
ಇನ್ನೂ 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂದಿತು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ.