HomeKarnataka Newsಸ್ಯಾಂಡಲ್‌ವುಡ್‌ಗೆ ಆಘಾತ: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ!

ಸ್ಯಾಂಡಲ್‌ವುಡ್‌ಗೆ ಆಘಾತ: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ!

For Dai;y Updates Join Our whatsapp Group

Spread the love

ಬೆಂಗಳೂರು: ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮನೆಯಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ದಿಲೀಪ್ ರಾಜ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಅನೇಕ ಕಲಾವಿದರು, ಸ್ನೇಹಿತರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ತಮ್ಮದೇ ಆದ ನಟನೆಯ ಮೂಲಕ ಗುರುತಿಸಿಕೊಂಡಿದ್ದ ಅವರು ಹಲವು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದರು.

ಮಿಲನ, ಯು ಟರ್ನ್, ಆರ್ಕೆಸ್ಟ್ರಾ ಮೈಸೂರು, ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.

ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ದಿಲೀಪ್ ರಾಜ್ ಸಕ್ರಿಯರಾಗಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು, ಪಾರು ಹಾಗೂ ನಾ ನಿನ್ನ ಬಿಡಲಾರೆ ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!