HomeCrime Newsಪತ್ನಿಯ ಖಾಸಗಿ ವಿಡಿಯೋ, ಚಾಟ್ ನೋಡಿ ಶಾಕ್! ಕೊನೆಗೆ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ದೂರು

ಪತ್ನಿಯ ಖಾಸಗಿ ವಿಡಿಯೋ, ಚಾಟ್ ನೋಡಿ ಶಾಕ್! ಕೊನೆಗೆ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ದೂರು

ಆನೇಕಲ್: ಪತ್ನಿಯ ವಿವಾಹೇತರ ಸಂಬಂಧದ ವಿಚಾರವಾಗಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ.

ಮುನಿಕೃಷ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ಸಂಬಂಧ ಪತ್ನಿ ನಯನಾ ಹಾಗೂ ಕುಮಾರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದೂರು ದಾಖಲಾಗಿದೆ.

ಮುನಿಕೃಷ್ಣ ಅವರು ಸುಮಾರು ಹತ್ತು ವರ್ಷಗಳ ಹಿಂದೆ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯ ನಯನಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಆರು ವರ್ಷದ ಮಗನಿದ್ದಾನೆ. ಆದರೆ, ಕಳೆದ ಕೆಲವು ವರ್ಷಗಳಿಂದ ಪತ್ನಿ ಹಾಗೂ ತಮ್ಮ ಸಂಬಂಧಿ ಕುಮಾರ ನಡುವೆ ವಿವಾಹೇತರ ಸಂಬಂಧವಿತ್ತು ಎಂಬ ಆರೋಪ ಕುಟುಂಬದಲ್ಲಿ ಕಲಹಕ್ಕೆ ಕಾರಣವಾಗಿತ್ತು.

ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿರುವ ಕುಮಾರ ಆಗಾಗ ಮುನಿಕೃಷ್ಣ ಅವರ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ನಯನಾಳನ್ನು ಕೆಲಸಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗಿ ಬರುತ್ತಿದ್ದ ಆತ, ಕಳೆದ ಎರಡು ವರ್ಷಗಳಿಂದ ಅವರೊಂದಿಗೆ ಸಂಬಂಧ ಹೊಂದಿದ್ದ ಎನ್ನುವುದು ಕುಟುಂಬದ ಆರೋಪವಾಗಿದೆ.

ಸುಮಾರು ಮೂರು ತಿಂಗಳ ಹಿಂದೆ ಕುಮಾರನೇ ಮುನಿಕೃಷ್ಣ ಅವರ ಮೊಬೈಲ್‌ಗೆ ಇಬ್ಬರೂ ಜೊತೆಯಲ್ಲಿರುವ ಫೋಟೋಗಳು, ಖಾಸಗಿ ವಿಡಿಯೋಗಳು ಹಾಗೂ ಚಾಟ್‌ಗಳನ್ನು ಕಳುಹಿಸಿದ್ದ ಎನ್ನಲಾಗಿದೆ. ಇದರಿಂದ ದಂಪತಿ ನಡುವೆ ಜಗಳ ಆರಂಭವಾಗಿದ್ದು, ಬಳಿಕ ನಯನಾ ಗಂಡನ ಮನೆಯಿಂದ ತವರು ಮನೆಗೆ ತೆರಳಿದ್ದರು.

ಇಷ್ಟಕ್ಕೇ ನಿಲ್ಲದ ಕುಮಾರ, ಸಾರ್ವಜನಿಕವಾಗಿ ಮುನಿಕೃಷ್ಣ ಅವರನ್ನು ನಿಂದಿಸುತ್ತಿದ್ದ ಹಾಗೂ ನಯನಾಳ ಹೊಟ್ಟೆಯಲ್ಲಿರುವ ಮಗು ತನ್ನದು ಎಂದು ಹೇಳಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಪತ್ನಿಯ ಸಂಬಂಧದ ವಿಚಾರ ಮತ್ತು ನಿರಂತರ ಅವಮಾನದಿಂದ ಮುನಿಕೃಷ್ಣ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ಸಾವಿಗೂ ಒಂದು ದಿನ ಮೊದಲು ಮುನಿಕೃಷ್ಣ ತಮ್ಮ ಸಹೋದರಿಯ ಬಳಿ ಈ ವಿಚಾರವನ್ನು ಹೇಳಿಕೊಂಡಿದ್ದರು. ಆದರೆ, ಮರುದಿನ ಬೆಳಿಗ್ಗೆ ಅವರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಆರೋಪಿಗಳ ಬಂಧನಕ್ಕೆ ಕುಟುಂಬಸ್ಥರ ಆಗ್ರಹ

ಮುನಿಕೃಷ್ಣ ಅವರ ಸಾವಿನ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ಆರೋಪಗಳು ತನಿಖೆಯಿಂದ ದೃಢಪಡಬೇಕಿವೆ. ಪೊಲೀಸರು ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img