ಗುಜರಾತ್ನ ಅಹ್ಮದಾಬಾದ್ನಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ. ಅಹ್ಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಮೇಘನಿನಗರ್ದಲ್ಲಿ ಪತನಗೊಂಡಿದೆ. ಇನ್ನೂ ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
Advertisement
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.
ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನೂ ಅವಘಡದ ಕುರಿತು ಅವರು, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದು, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದಾರೆ.