ಕೊಲ್ಕತ್ತಾ:- ಶಾಲೆಯೊಂದರ ಬಳಿಯೇ ಬಾಂಬ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರೌಢಶಾಲೆಯ ಬಳಿ ಜರುಗಿದೆ.ಸ್ಫೋಟದಲ್ಲಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದ.
Advertisement
ಆತನನ್ನು ಬರಾಸತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರತೀಕ್ಷಾ ಜಾರ್ಖರಿಯಾ ತಿಳಿಸಿದ್ದಾರೆ.
ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಪಶ್ಚಿಮ ಬಂಗಾಳ ಸರ್ಕಾರದ ಆಹಾರ ಮತ್ತು ಸರಬರಾಜು ಸಚಿವ ರತಿನ್ ಘೋಷ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದ ವ್ಯಕ್ತಿ ಬೇರೆ ರಾಜ್ಯದ ನಿವಾಸಿಯಾಗಿದ್ದಾನೆ. ಸ್ಫೋಟ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.