ಬೆಂಗಳೂರು: ಯಾವಾಗ ಓರ್ವ ಯುವತಿ ಮಧ್ಯ ರಾತ್ರಿ 12 ಗಂಟೆಗೆ ರಸ್ತೆ ಮೇಲೆ ಯಾವುದೇ ಭಯವಿಲ್ಲದೆ ಓಡಾಡುತ್ತಾಲೋ ಆಗಲೇ ದೇಶಕ್ಕೆ ಸ್ವಾತಂತ್ರ್ಯ ಬರೋದು ಎಂಬ ಮಾತೊಂದಿತ್ತು,. ಆದರೆ ಇಡೀ ದೇಶದಲ್ಲಿ ಈಗಲೂ ಹೆಣ್ಮಕ್ಕಳಿಗೆ ಯಾವುದೇ ಸುರಕ್ಷತೆ ಇಲ್ಲ. ದಿನಕ್ಕೊಂದು ರೇಪ್ ಕೇಸ್ಗಳು ದಾಖಲಾಗುತ್ತಿವೆ. ಇದೀಗ ಬೆಂಗಳೂರಿನಲ್ಲಿ ಅತ್ಯಾಚಾರ ನಡೆದಿದೆ.
ಹೌದು ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಯನ್ನು ಅದೇ ಕಾಲೇಜಿನ ಕಿರಿಯ ವಿದ್ಯಾರ್ಥಿ ವಾಶ್ರೂಮ್ಗೆ ಎಳೆದೊಯ್ದುಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅಕ್ಟೋಬರ್ 10 ರಂದು ನಡೆದ ಘಟಣೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಘಟನೆಯು ಅಕ್ಟೋಬರ್ 10ರಂದು ನಡೆದಿದೆ. ಅಕ್ಟೋಬರ್ 15ರಂದು ನೀಡಿದ ದೂರು ಆಧರಿಸಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 64ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ದಿನಾಂಕ 10-10-2025 ರಂದು ಬೆಳಿಗ್ಗೆ 8.55ಕ್ಕೆ ತರಗತಿಗೆ ಹಾಜರಾಗಿದ್ದ ಸಂತ್ರಸ್ತೆ ಆರೋಪಿ ಜೀವನ್ನಿಂದ ಕೆಲವೊಂದು ಸಾಮಗ್ರಿಗಳನ್ನು ಕಲೆಕ್ಟ್ ಮಾಡಿಕೊಳ್ಳಬೇಕಾಗಿದ್ದು, ಲಂಚ್ ಬ್ರೇಕ್ನಲ್ಲಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾಳೆ.
ಹೀಗೆ ಲಂಚ್ ವೇಳೆಯಲ್ಲಿ ಭೇಟಿಯಾದಾಗ ಆರೋಪಿಯು ಸಂತ್ರಸ್ತೆಯ ಬಳಿ ಸ್ವಲ್ಪ ಮಾತನಾಡಬೇಕೆಂದು ಹೇಳಿ ಡೌನ್ ಸ್ಪೇರ್ಸ್ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ಆರೋಪಿಯ ಮನವಿ ಮೇರೆಗೆ 7ನೇ ಮಹಡಿ ಪಿಜಿ ಬ್ಲಾಕ್ಗೆ ಹೋಗಿರುತ್ತಾರೆ. ಅಲ್ಲಿ, ಆರೋಪಿಯು ಸಂತ್ರಸ್ತೆಗೆ ಕಿಸ್ ಮಾಡಲು ಬಂದಿದ್ದಾನೆ. ತಪ್ಪಿಸಿಕೊಳ್ಳಲು ಮುಂದಾದಾಗ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು 6ನೇ ಮಹಡಿಗೆ ಬಂದ ಆರೋಪಿ, ಆಕೆಯನ್ನು ಬಲವಂತವಾಗಿ ವಾಶ್ ರೂಮ್ ಒಳಗೆ ಕರೆದುಕೊಂಡು ಡೋರ್ ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂತ್ರಸ್ತೆಯನ್ನು ಪುರುಷರ ಶೌಚಗೃಹದೊಳಕ್ಕೆ ಎಳೆದೊಯ್ದ ಆರೋಪಿ ಅಲ್ಲಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಅಲ್ಲದೆ, ಬಲವಂತ ಮಾಡಿದ್ದಾನೆ. ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯಿಂದ ಆಘಾತಗೊಂಡ ವಿದ್ಯಾರ್ಥಿನಿ ಈ ವಿಚಾರವನ್ನು ಆಪ್ತ ಸ್ನೇಹಿತರ ಬಳಿ ಹೇಳಿಕೊಂಡಿದ್ದಾಳೆ. ಅವರು ಆಕೆಗೆ ಧೈರ್ಯ ತುಂಬಿ ಪೋಷಕರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ನಂತರ ಪೊಲೀಸರ ಜತೆ ಹನುಮಂತನಗರ ಠಾಣೆಗೆ ತೆರಳಿ ಸಂತ್ರಸ್ತೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.