ಬೆಂಗಳೂರು: ಸರಣಿ ಬೆಲೆ ಏರಿಕೆಗಳಿಂದ ತತ್ತರಿಸಿರುವ ಕರ್ನಾಟಕ ಜನತೆಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಲಿದೆ. ಇತ್ತೀಚೆಗಷ್ಟೇ ಕೆಎಸ್ಆರ್ಟಿಸಿ ಬಸ್ಗಳ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಖಾಸಗಿ ಬಸ್ ಸರದಿ. ರಾಜ್ಯದಾದ್ಯಂತ ಖಾಸಗಿ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ.
ಹೌದು ರಾಜ್ಯ ಸರಕಾರ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಕ್ರಮ ಹಿಂಪಡೆಯದಿದ್ದರೆ ನಾವು ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ ಎಂದು ಮಾಲೀಕರು ಹೇಳಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಟರಾಜ್ ಶರ್ಮಾ ತಿಳಿಸಿದ್ದಾರೆ. ದರ ಶೇಕಡಾ 15 ರಿಂದ 20 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಆದರೆ ಒಂದು ವೇಳೆ ಶೇ 20 ರಷ್ಟು ಏರಿಕೆ ಮಾಡಿದರೆ ಜನಸಾಮಾನ್ಯರಿಗೆ ತೀರಾ ಹೊರೆ ಆಗಲಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ. ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಖಾಸಗಿ ಬಸ್‌ಗಳು ಟಿಕೆಟ್ ದರ ಹೆಚ್ಚಳ ಮಾಡುತ್ತವೆ. ಆದರೆ ಇದೀಗ ಕಾಯಂ ಆಗಿ ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿರುವುದು ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಲಿದೆ.