ವಿಜಯಪುರ: ನಗರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದ್ದು, ದುಷ್ಕರ್ಮಿಗಳು ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ.
ಗ್ಯಾಂಗ್ ಬಾವಡಿ ನಿವಾಸಿ ಯಾಸೀನ್ ಕೊಲೆಯಾದ ವ್ಯಕ್ತಿ. ಸ್ಕೂಟಿಯಲ್ಲಿ ತೆರಳುತ್ತಿದ್ದ ಯಾಸೀನ್ನನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡು ಎದೆಗೆ ತಗುಲಿದ ಪರಿಣಾಮ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ ಎರಡು ಸುತ್ತಿನ ಗುಂಡಿನ ಖಾಲಿ ಕೇಸಿಂಗ್ಗಳು ಪತ್ತೆಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹತ್ಯೆಗೆ ನಿಖರ ಕಾರಣವೇನು? ದುಷ್ಕರ್ಮಿಗಳು ಯಾರು? ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








