ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಸ್ನೇಹಾಲಯ ಕ್ರಿಯೇಶನ್ಸ್ ಅರ್ಪಿಸುವ ಹಾರರ್, ಸಸ್ಪೆನ್ಸ್, ಥ್ರಿಲ್ಲರ್ `ಶಿಲ್ಪಾ ಶ್ರೀನಿವಾಸ್’ ಕನ್ನಡ ಚಲನಚಿತ್ರದ ಚಿತ್ರೀಕರಣ ಹೊಸಕೋಟೆಯ ಗಟ್ಟಿಗನಬ್ಬೆ ಸುತ್ತಮುತ್ತ ಭರದಿಂದ ಸಾಗಿದೆ.
ಖ್ಯಾತ ನಿರ್ಮಾಪಕರು, ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರೂ ಆದ ಶಿಲ್ಪಾ ಶ್ರೀನಿವಾಸ್ ಅವರದೇ ಹೆಸರಿನ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ನಟ ಹಾಗೂ ಸಂಕಲನಕಾರ ನಾಗೇಂದ್ರ ಅರಸ್ ಕ್ಲಾಪ್ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡದರು.
ಹೊಸಕೋಟೆ, ಚಿಕ್ಕಬಳ್ಳಾಪುರ, ಗಾಂಧಿನಗರದಲ್ಲಿ ಒಟ್ಟು ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಆರ್.ಕೆ. ಗಾಂಧಿ ಹೇಳಿದ್ದಾರೆ. ಕಿಶೋರ್ ಕಾಸರಗೋಡು, ಸ್ವಾತಿ ಲಿಂಗರಾಜ್ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ರಿಯಾಂಕ, ಶೋಭರಾಜ್, ನಾಗೇಂದ್ರ ಅರಸ್, ಕಿರಣಕುಮಾರ್ ಗಟ್ಟಿಗನಬ್ಬೆ, ಸಿ.ಟಿ. ಜಯರಾಮ್, ಹೊಸಕೋಟೆ ಶಿವಕುಮಾರ್, ಲೋಕೇಶ್, ಬೆಂಗಳೂರು ಮನು, ಮಾಸ್ಟರ್ ಮನ್ವಿತ್, ಮಾಸ್ಟರ್ ಅಭ್ಯಂತ್, ಭಕ್ತರಹಳ್ಳಿ ರವಿ ಮೊದಲಾದವರಿದ್ದಾರೆ.
ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಮುಗಿಲ ಮಲ್ಲಿಗೆ, ಲಿಲ್ಲಿ ಸಿನಿಮಾದ ಯುವ ನಿರ್ದೇಶಕ ಆರ್.ಕೆ. ಗಾಂಧಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅನಿರುದ್ಧ ಶಾಸ್ತ್ರಿ ಸಂಗೀತ, ಪ್ರತಾಪ್ ಭಟ್ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ, ವಿನಯ್ ಜಿ.ಆಲೂರ ಸಂಕಲನ, ಮೋಹನ್ ಕುಮಾರ್ ಪ್ರಸಾಧನ, ಇಂದ್ರಕುಮಾರ್ ಸ್ಥಿರಚಿತ್ರ, ಮಲ್ಲಿಕಾರ್ಜನ್ ಕಲಾ ನಿರ್ದೇಶನ, ಎಂ.ಜಿ. ಕಲ್ಲೇಶ್, ಡಾ. ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಿಗಿ ಪಿ.ಆರ್.ಓ ಆಗಿದ್ದಾರೆ.