ಬಿಹಾರ: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ. ಮೃತರನ್ನು ಸುರೇಂದ್ರ ಕೆವಾತ್ ಎಂದು ಗುರುತಿಸಲಾಗಿದೆ. ಸುರೇಂದ್ರ ಅವರು ಶೇಕ್‌ಪುರದಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು.
Advertisement
ಸುರೇಂದ್ರ ಅವರಿಗೆ 4 ಗುಂಡುಗಳು ತಗುಲಿದ್ದು, ತಕ್ಷಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಟ್ನಾದಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಆಘಾತಕಾರಿ ಹತ್ಯೆ ಇದಾಗಿದೆ. ಇದಕ್ಕೂ ಮೊದಲು, ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗಾಂಧಿ ಮೈದಾನದ ಬಳಿಯ ನಗರದ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು.