ಅಪರಿಚಿತ ಬಂದೂಕುಧಾರಿಗಳಿಂದ ಗುಂಡೇಟು: ಬಿಹಾರದ ಇಬ್ಬರು ವಲಸೆ ಕಾರ್ಮಿಕರು ದುರ್ಮರಣ!

0
Spread the love

ಮಣಿಪುರ:- ಅಪರಿಚಿತ ಬಂದೂಕುಧಾರಿಗಳು ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಬಿಹಾರದ ಗೋಪಾಲ್ ಗಂಜ್ ನ ಸುನಾಲಾಲ್ ಕುಮಾರ್ (18) ಮತ್ತು ದಶರತ್ ಕುಮಾರ್ (17) ಎಂದು ಗುರುತಿಸಲಾಗಿದೆ.

Advertisement

ಶನಿವಾರ ಸಂಜೆ ಕೈರಾಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಇಬ್ಬರು ಕಾರ್ಮಿಕರು ಕೆಲಸ ಮುಗಿಸಿ ಬಾಡಿಗೆ ಮನೆಗೆ ತೆರಳುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆದಿದೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಈ ವೇಳೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ‘ಅಸ್ವಾಭಾವಿಕ ಸಾವು’ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Spread the love

LEAVE A REPLY

Please enter your comment!
Please enter your name here