ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: BJP

0
Spread the love

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್​ನಲ್ಲೂ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್​​ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಹೈಕೋರ್ಟ್​ ಹೇಳಿದೆ. ಇದರ ಬೆನ್ನಲ್ಲೇ ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಹಾಕಿದೆ.

Advertisement

ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ” ಎಂದು ಬಿಜೆಪಿ ಹೇಳಿದೆ. ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು.

ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ” ಎಂದಿದೆ. ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದೆ.


Spread the love

LEAVE A REPLY

Please enter your comment!
Please enter your name here