ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲಗಳನ್ನು ಬಿಟ್ಟು ಸೂಕ್ತ ಆಡಳಿತ ನಡೆಸಬೇಕು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಕಳೆದ ಒಂದು ವರ್ಷದಿಂದ ಗೊಂದಲದ ವಾತಾವರಣವಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಆಂತರಿಕ ಗೊಂದಲಗಳನ್ನು ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ವಾಗ್ದಾಳಿ ನಡೆಸಿದರು.31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ಗೆ ಪತ್ರ ಬರೆದ ವಿಚಾರದಲ್ಲಿ ತಪ್ಪೇನಿಲ್ಲ. ಸರ್ಕಾರಕ್ಕೆ ಪೂರ್ಣ ಬಹುಮತವಿರುವ ಹಿನ್ನೆಲೆಯಲ್ಲಿ ಗೊಂದಲ ಬಿಟ್ಟು ಪರಿಣಾಮಕಾರಿ ಆಡಳಿತ ನಡೆಸಬೇಕು ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿಗೆ ಹೋಗಿ ಬರುತ್ತಿರುವ ವಿಚಾರ ಪ್ರಸ್ತಾಪಿಸಿದ ಅವರು, “ಯಾರು ಮುಖ್ಯಮಂತ್ರಿ ಆಗಬೇಕು ಎಂಬುದಕ್ಕಿಂತ ಮೊದಲು ಗೊಂದಲ ಬಗೆಹರಿಯಬೇಕು,” ಎಂದು ಹೇಳಿದರು. ಇದೇ ವೇಳೆ, ಗುಲ್ಬರ್ಗಾ ವಿಶ್ವವಿದ್ಯಾಲಯವು ತಮಗೆ ಗೌರವ ಡಾಕ್ಟರೇಟ್ ನೀಡಿರುವುದಕ್ಕಾಗಿ ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಧನ್ಯವಾದ ತಿಳಿಸಿದರು.



