Shreyas Iyer: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್

0
Spread the love

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತೀಯ ಏಕದಿನ ತಂಡದ ನಾಯಕ ಶ್ರೇಯಸ್ ಅಯ್ಯರ್ ಸಿಡ್ನಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅಯ್ಯರ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

Advertisement

ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್​ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.

ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿತ್ತು. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್‌ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಇದೀಗ ಚೇತರಿಸಿಕೊಂಡಿರುವ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಇದಾಗ್ಯೂ ವೈದ್ಯಕೀಯ ಮೇಲ್ವಿಚಾರಣೆಗಾಗಿ ಅವರು ಕೆಲ ದಿನಗಳ ಕಾಲ ಸಿಡ್ನಿಯಲ್ಲೇ ಉಳಿಯಲಿದ್ದಾರೆ. ಆ ಬಳಿಕವಷ್ಟೇ ಶ್ರೇಯಸ್ ಅಯ್ಯರ್ ಮುಂಬೈಗೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Spread the love

LEAVE A REPLY

Please enter your comment!
Please enter your name here