ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ಜರುಗುವ ಶ್ರೀ ದುರ್ಗಾದೇವಿ ಜಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
Advertisement
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬೆಳಿಗ್ಗೆ ದುರ್ಗಾ ದೇವಿ ಪೂಜಾರಿಗಳಿಂದ ಅಗ್ನಿ ಕುಂಡ ಪ್ರವೇಶ ಕಾರ್ಯಕ್ರಮ ನಡೆಯಿತು. ರಥೋತ್ಸವದ ಪ್ರಯುಕ್ತ ದೇವಿಗೆ ವಿಶೇಷ ಜಲಾಭಿಷೇಕ, ಅಲಂಕಾರ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ಮಂಗಳ ವಾದ್ಯಗಳ ಮೂಲಕ ಮೆರವಣಿಗೆ ಸಂಚರಿಸಿತು. ಮಧ್ಯಾಹ್ನ ಸರ್ವ ಧರ್ಮ ಸಾಮೂಹಿಕ ವಿವಾಹ ನಡೆಯಿತು.