ವಿಜಯಸಾಕ್ಷಿ ಸುದ್ದಿ, ಶಿಕಾರಿಪುರ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಬಿ.ವೈ. ರಾಘವೇಂದ್ರರು ಸೋಮವಾರ ಸಂಜೆ ಶಿಕಾರಿಪುರ ತಾಲೂಕ ಕಡೇನಂದಿಹಳ್ಳಿ ತಪೋಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಂತರ ಅವರು ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಹಾಗೂ ಕ್ಷೇತ್ರದ ದೈವಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಸಂಸದರಿಗೆ ಸ್ಮರಣಿಕೆಯೊಂದಿಗೆ ಆಶೀರ್ವದಿಸಿ ಶುಭ ಹಾರೈಸಿ ಬಿ.ವೈ.ರಾಘವೇಂದ್ರ ಅವರಿಂದ ಜನ ಕಲ್ಯಾಣ ಅಭಿವೃದ್ಧಿ ಕಾರ್ಯಗಳು ಹೆಚ್ಚು ಹೆಚ್ಚಾಗಿ ನಡೆಯಲಿ ಎಂದರು.
ಬಿ.ವೈ. ರಾಘವೇಂದ್ರ ಮಾತನಾಡಿ, ಶ್ರೀಗಳ ಹಾಗೂ ಜನತೆಯ ಆಶೀರ್ವಾದದಿಂದ ನಾಲ್ಕನೇ ಬಾರಿಗೆ ಸಂಸದನಾಗಿ ಆಯ್ಕೆಯಾಗಿದ್ದು, ಇನ್ನೂ ಹೆಚ್ಚಿನ ಜನೋಪಯೋಗಿ ಪ್ರಗತಿ ಕಾರ್ಯಗಳನ್ನು ಮಾಡಲು ಅವಕಾಶ ದೊರೆತಿದೆ ಎಂದರು.
ಮಠದ ಸದ್ಭಕ್ತರು, ಅಭಿಮಾನಿಗಳು, ರಾಜಕೀಯ ಮುಖಂಡರು ಹಾಗೂ ಶ್ರೀ ಗುರು ರೇವಣಸಿದ್ದೇಶ್ವರ ಜನಕಲ್ಯಾಣ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.