ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಶಕ್ತಿದೇವತೆ ಶ್ರೀಮಂತಗಡದ ಶ್ರೀ ಹೊಳಲಮ್ಮದೇವಿಯ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಭಾರತ ಹುಣ್ಣಿಮೆಯ ದಿನವಾದ ಫೆ.12ರ ಸಂಜೆ 5 ಗಂಟೆಗೆ ಅಪಾರ ಭಕ್ತರ ಜಯಘೋಷದೊಂದಿಗೆ ಜರುಗಿತು.
Advertisement
ಇದಕ್ಕೂ ಮೊದಲು ಸಂಪ್ರದಾಯದಂತೆ ಬೆಳಿಗ್ಗೆ ಶ್ರೀ ಹೊಳಲಮ್ಮ ದೇವಿಗೆ ವಿಶೇಷ ಪೂಜೆಗಳು ನಡೆದವು. ತಾಲೂಕು ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ರಥಕ್ಕೆ ಉತ್ತತ್ತಿ, ಬಾಳೆಹಣ್ಣನ್ನು ಸಮರ್ಪಿಸಿ ದೇವಿಯ ಕೃಪೆಗೆ ಪಾತ್ರರಾದರು.