ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಶ್ರೀ ಜಗದ್ಗುರು ಶಿವಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 65 ವಿದ್ಯಾರ್ಥಿಗಳಲ್ಲಿ 60 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.92 ಫಲಿತಾಂಶವನ್ನು ದಾಖಲಿಸಿದ್ದಾರೆ.
11 ವಿದ್ಯಾರ್ಥಿಗಳು ಪ್ರಶಸ್ತಿ ಸಹಿತ ಪ್ರಥಮ ಶ್ರೇಣಿಯಲ್ಲಿ, 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶ್ರೇಯಾ ಕಬಾಡಿ ಕಾಲೇಜಿಗೆ ಪ್ರಥಮ ಸ್ಥಾನ, ಸೃಷ್ಟಿ ಜಕ್ಕಲಿ ದ್ವಿತೀಯ ಸ್ಥಾನ ಹಾಗೂ ಕಾವ್ಯಾ ಓದಿಸುಮಠ ಇವರು ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿಗೆ ಕೀರ್ತಿ ತಂದ ಎಲ್ಲ ವಿದ್ಯಾರ್ಥಿಗಳಿಗೆ ಪೂಜ್ಯ ಶ್ರೀಗಳವರು, ವಿದ್ಯಾಸಂಸ್ಥೆಯ ಪದಾಧಿಕಾರಿಗಳಾದ ಬಿ.ಎಸ್. ಪಾಟೀಲ, ಡಾ. ಜಿ.ಬಿ. ಪಾಟೀಲ, ಕಾಲೇಜಿನ ಪ್ರಾಚಾರ್ಯ ಎಸ್.ವ್ಹಿ. ವೆರ್ಣೆಕರ, ಕಾಲೇಜಿನ ಸರ್ವ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.



