ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಆಚರಿಸಲಾಯಿತು.
Advertisement
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಶ್ರೀ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರಾದ ಸತೀಶ ಮುರಗೋಡ, ಹನುಮಂತ ಲಾತೂರ, ಲಕ್ಷ್ಮಣ ಉಪ್ಪಾರ, ಕಲ್ಲಪ್ಪ ಉಪ್ಪಾರ ಹಾಗೂ ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.