ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಗದಗ-ಬೆಟಗೇರಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ-2024ನ್ನು ಅಕ್ಟೋಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದರಾದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಣದೀಪ ಡಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಆಗಮಿಸುವರು.
ನಿಪ್ಪಾಣಿಯ ವಿ.ಎಸ್.ಎಂ.ಜಿ.ಆಯ್. ಬಾಗೇವಾಡಿ ಕಾಲೇಜಿನ ಪ್ರಾಚಾರ್ಯ ಡಾ. ಎನ್.ಎಸ್. ಮಾದಣ್ಣವರ ಶ್ರೀ ಮಹರ್ಷಿ ವಾಲ್ಮೀಕಿ ಆರ್ದಶಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸಲಿದ್ದಾರೆ.